ರಾಜ್ಯ

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್

Lingaraj Badiger

ನವದೆಹಲಿ: ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸುತ್ತೂರು ಜಗದ್ಗುರು ವೀರಸಿಂಹಾಸನ ಮಠದ ವತಿಯಿಂದ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸುತ್ತೂರು ಮಠ ಆಧ್ಯಾತ್ಮಕ ಮೌಲ್ಯಗಳು ಮತ್ತು ಆದರ್ಶಗಳ ಮೇಲೆ ಸಾಮಾಜಿಕ ಆರ್ಥಿಕ ನ್ಯಾಯ ಒದಗಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಸುತ್ತೂರು ಮಠ ಅತ್ಯುತ್ತಮ ಸಾಂಸ್ಕೃತಿಕ ಚಳುವಳಿಯಾಗಿಯೂ ಕಾರ್ಯ ನಿರ್ವಹಿಸುತ್ತಿದೆ. ವಿದ್ಯ ಜತೆಗೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ 'ಸುತ್ತೂರು ಶ್ರೀ ಮಠ - ಗುರು ಪರಂಪರೆ' ಪುಸ್ತಕವನ್ನು ಬಿಡುಗಡೆ ಮಾಡಿದರು.

SCROLL FOR NEXT