ಡಾ. ಕೆ ಸುಧಾಕರ್ 
ರಾಜ್ಯ

ಗೋಹತ್ಯೆ ಮಹಾಪಾಪ, ಗೋಹತ್ಯೆ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾಗೃತಿ ಆಂದೋಲನ: ವೈದ್ಯಕೀಯ ಶಿಕ್ಷಣ ಸಚಿವ

ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ.

ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, "ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ" ಎಂದರು.

"ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು" ಎಂದರು.

"ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ" ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್ ಬೆದರಿಕೆ

IPL 2026: ಸತತ 6 ಸೋಲುಗಳ ನಂತರ RCB ಮಣಿಸಿ ಗೆದ್ದ LSG, 3ನೇ ಸ್ಥಾನಕ್ಕೆ ಕುಸಿದ ಆರ್‌ಸಿಬಿ!

ನನಗೆ ನಂಬರ್ ಬೇಕು, ಕೋರಿಕೆಯಲ್ಲ: ಸಂಖ್ಯಾಬಲ ತೋರಿಸುವಂತೆ ವಿಜಯ್ ಗೆ ತಮಿಳುನಾಡು ರಾಜ್ಯಪಾಲ ತಾಕೀತು!

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

SCROLL FOR NEXT