ಸಚಿವ ಪ್ರಭು ಚವ್ಹಾಣ್ 
ರಾಜ್ಯ

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್

 ಕಲ್ಯಾಣ  ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಬೀದರ್: ಕಲ್ಯಾಣ  ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಪಶುವೈದ್ಯಾಧಿಕಾರಿಗಳು ರೋಗ ನಿಯಂತ್ರಣಕ್ಕೆ ಮುಂದಾಗಬೇಕು, ಇಲ್ಲವೇ ಪರಿಣಾಮ  ಎದುರಿಸಲು ಸಿದ್ಧರಾಗಿ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಒಂದೆಡೆ   ಸಂಕಷ್ಟ, ಮತ್ತೊಂದೆಡೆ ನೆರೆಯಿಂದ ಆದಾಯವಿಲ್ಲದೆ ರೈತರು ಕಂಗೆಟ್ಟಿದ್ದಾರೆ. ಇಂತಹ ವೇಳೆಯಲ್ಲಿ ಪಶುಸಂಗೋಪನೆ ಒಂದೇ ರೈತರಿಗೆ ಜೀವನಾಧಾರವಾಗಿದೆ. ಈಗ ಕಲ್ಯಾಣ ಕರ್ನಾಟಕ  ಭಾಗದ ಕೆಲ ಜಿಲ್ಲೆಗಳಲ್ಲಿ ‘ಲಂಪಿಸ್ಕಿನ್’ ಜಾನುವಾರುಗಳಿಗೆ ಈ ವಿಚಿತ್ರ ಕಾಯಿಲೆ  ಕಂಡುಬಂದಿದ್ದು, ದನ-ಕರುಗಳ ಮೈಮೇಲೆ ಗುಳ್ಳೆ ಬರುವುದು, ಜ್ವರ ಕಾಣಿಸಿಕೊಳ್ಳುವುದು, ಆಹಾರ ಸೇವನೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವುದರಿಂದ ಪಶುಪಾಲಕರು  ಆಂತಂಕಕ್ಕಿಡಾಗಿರುವುದು ತಮ್ಮ ಗಮನಕ್ಕೂ ಬಂದಿದೆ ಎಂದರು.

ಕಲ್ಯಾಣ  ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮತ್ತು  ಪಶುವೈದ್ಯಾಧಿಕಾರಿಗಳಿಗೆ ರೋಗ ಹೆಚ್ಚು ಕಂಡುಬರುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ  ರೋಗ  ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ, ಹೆಚ್ಚು ಪ್ರಕರಣಗಳಿರುವ  ಗ್ರಾಮಗಳಲ್ಲಿ ಪಶು ಆರೋಗ್ಯ ಶಿಬಿರ ನಡೆಸಿ ರೋಗವನ್ನು ಹತೋಟಿಗೆ ತರಲು ಕ್ರಮ  ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ