ರಾಜ್ಯ

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೋನಾ ಸೋಂಕು ದೃಢ

Vishwanath S

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಟ್ವೀಟ್ ಮಾಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

SCROLL FOR NEXT