ರಾಜ್ಯ

ಕರ್ನಾಟಕದಲ್ಲಿ 8ನೇ ವಿಮ್ಸ್ ಮಾದರಿ ಆಸ್ಪತ್ರೆಗೆ ಶೀಘ್ರ ಮಂಜೂರಾತಿ- ಡಾ. ಹರ್ಷವರ್ಧನ್

Nagaraja AB

ಬಳ್ಳಾರಿ: ಕೇಂದ್ರದ ಎನ್.ಡಿ.ಎ ಸರ್ಕಾರ ದೇಶದ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಕರ್ನಾಟಕದಲ್ಲಿ ವಿಮ್ಸ್ ಮಾದರಿಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ. 

ದೇಶದ 8 ನೇ ವಿಮ್ಸ್ ಮಾದರಿ ಆಸ್ಪತ್ರೆ ಕರ್ನಾಟಕದಲ್ಲಿ ತಲೆ ಎತ್ತಲಿದ್ದು, ಕರ್ನಾಟಕದಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒತ್ತು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

 ನಗರದಲ್ಲಿಂದು 150 ಕೋಟಿ ರೂ ವೆಚ್ಚದಲ್ಲಿ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ನಿರ್ಮಿಸಲಾಗಿರುವ 200 ಹಾಸಿಗೆಗಳ ಟ್ರಾಮ ಕೇರ್ ಸೆಂಟರ್ ಅನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 50ವರ್ಷ ಕಳೆದರೂ ದೆಹಲಿಯ ವಿಮ್ಸ್ ಮಾದರಿ ಆಸ್ಪತ್ರೆ ಒಂದೇ ಒಂದು ಇತ್ತು. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ
ದೇಶದ ವಿವಿಧೆಡೆ ವಿಮ್ಸ್ ಮಾದರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಿದೆ. ಈಗ ಮತ್ತೊಂದು ವಿಮ್ಸ್ ಮಾದರಿ ಆಸ್ಪತ್ರೆಯನ್ನು ಕರ್ನಾಟಕದಲ್ಲಿ ಆರಂಭಿಸಲಾಗುತ್ತಿದೆ.ಈ ಪ್ರಸ್ತಾವನೆ ಹಣಕಾಸು ಇಲಾಖೆ ಮುಂದಿದ್ದು ಸದ್ಯದಲ್ಲೇ ಮಂಜೂರಾತಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

SCROLL FOR NEXT