ಕೊರೋನಾ ಸೋಂಕಿನಿಂದ ಡಿಕೆಶಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.
ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಕಳೆದ ಆರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು.
ಇದೀಗ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಪುಷ್ಪ ಗುಚ್ಛ ನೀಡುವ ಮೂಲಕ ಡಿಕೆ ಶಿವಕುಮಾರ್ ಅವರನ್ನು ಆಸ್ಪತ್ರೆಯಿಂದ ಬೀಳ್ಗೂಟ್ಟಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಡಾ. ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.