ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ಸಿದ್ಧತೆ ಬಗ್ಗೆ ಕೇಂದ್ರ ಸರ್ಕಾರ ಪರಾಮರ್ಶೆ

ಕೋವಿಡ್-19 ಲಸಿಕೆ ಪೂರೈಕೆ, ವಿತರಣೆ ಮತ್ತು ಆಡಳಿತ ನಿರ್ವಹಣೆಯನ್ನು ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಅಗತ್ಯ ತಯಾರಿಯನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು: ಕೋವಿಡ್-19 ಲಸಿಕೆ ಪೂರೈಕೆ, ವಿತರಣೆ ಮತ್ತು ಆಡಳಿತ ನಿರ್ವಹಣೆಯನ್ನು ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಅಗತ್ಯ ತಯಾರಿಯನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗಳು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ಕೋವಿಡ್ ಸಂಬಂಧಿ ವಿಷಯಗಳ ಕುರಿತು ಚರ್ಚೆ ನಡೆಸಿದ್ದರು. ಕೋವಿಡ್-19 ಲಸಿಕೆ ಬಗ್ಗೆ ಕೂಡ ಮಾತುಕತೆ ನಡೆದಿತ್ತು. 

ಸಭೆಯ ಬಳಿಕ ಆರೋಗ್ಯ ಇಲಾಖೆ ಹೇಳಿಕೆ ಹೊರಡಿಸಿದ್ದು, ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸ್ಟೀರಿಂಗ್ ಸಮಿತಿ ಮತ್ತು ರಾಜ್ಯ ಕಾರ್ಯಪಡೆ ಲಸಿಕೆ ಸಂಗ್ರಹ ಮತ್ತು ಪೂರೈಕೆ ಬಗ್ಗೆ ಸಭೆ ನಡೆಸಿದೆ.

ಪ್ರತಿ ಜಿಲ್ಲಾಧಿಕಾರಿಗಳಿಗೆ ರಾಜ್ಯ ಆರೋಗ್ಯ ಇಲಾಖೆ ಪತ್ರವನ್ನು ನೀಡಿದ್ದು, ಬ್ಲಾಕ್ ಕಾರ್ಯಪಡೆ ಸಭೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಇಲ್ಲಿಯವರೆಗೆ 2 ಲಕ್ಷದ 24 ಸಾವಿರದ 083 ಸರ್ಕಾರಿ ಆರೋಗ್ಯಸೇವಾ ಕಾರ್ಯಕರ್ತರು ಮತ್ತು 2 ಲಕ್ಷದ 45 ಸಾವಿರದ 773 ಖಾಸಗಿ ಆರೋಗ್ಯಸೇವಾ ಕಾರ್ಯಕರ್ತರು ಲಸಿಕೆಗೆ ದಾಖಲಾತಿ ಮಾಡಿಕೊಂಡಿದ್ದಾರೆ. 

ರಾಜ್ಯ ಸರ್ಕಾರ 30 ಸಾವಿರಕ್ಕೂ ಹೆಚ್ಚು ಲಸಿಕಾ ಕೇಂದ್ರಗಳನ್ನು ಗುರುತಿಸಿದ್ದು, ಸರ್ಕಾರಿ ಸ್ಥಾಪನೆಯಲ್ಲಿ 10,000 ಕ್ಕೂ ಹೆಚ್ಚು ಲಸಿಕೆಗಳನ್ನು ಗುರುತಿಸಲಾಗಿದೆ ಮತ್ತು ಖಾಸಗಿ ಸೌಲಭ್ಯಗಳಿಂದ ಲಸಿಕೆ ಹಾಕುವವರನ್ನು ಗುರುತಿಸುವ ಪ್ರಕ್ರಿಯೆಯನ್ನು ಹಾಗೂ ಕೇಂದ್ರದ ಸೂಚನೆಯಂತೆ ಪ್ರಾರಂಭಿಸಲಾಗಿದೆ ಎಂದು ಹೇಳಿದೆ. 

ನಿನ್ನೆಯ ಹೊತ್ತಿಗೆ, 68,317 ಸರ್ಕಾರ ಮತ್ತು 35,310 ಖಾಸಗಿ ಸಂಭಾವ್ಯ ವ್ಯಾಕ್ಸಿನೇಟರ್‌ಗಳನ್ನು ಗುರುತಿಸಲಾಗಿದೆ. "ಕೇಂದ್ರದಿಂದ ಸರಬರಾಜು ಮಾಡಲಾಗುತ್ತಿರುವ ಕೋಲ್ಡ್ ಚೈನ್ ಉಪಕರಣಗಳ ಸ್ಥಾಪನೆಗಾಗಿ ಸರಕುಗಳ ಪಟ್ಟಿಯನ್ನು ಅವರೊಂದಿಗೆ ಹಂಚಿಕೊಳ್ಳಲಾಗಿದೆ ಮತ್ತು ಅದನ್ನು ಸ್ಥಾಪಿಸಲು ಸಿದ್ಧತೆಗಳು ನಡೆಯುತ್ತಿವೆ. ಪಶುಸಂಗೋಪನಾ ವಿಭಾಗದಲ್ಲಿ ಕೋಲ್ಡ್ ಸ್ಟೋರೇಜ್ ಲಭ್ಯತೆಯನ್ನು ಕೇಂದ್ರದೊಂದಿಗೆ ಹಂಚಿಕೊಳ್ಳಲಾಗಿದೆ. ಭಾರತದ ಆಹಾರ ನಿಗಮದಲ್ಲಿ ಲಭ್ಯವಿರುವ ಒಣ ಶೇಖರಣಾ ಸ್ಥಳವನ್ನು ಸಹ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!