ರಾಜ್ಯ

ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಡಿಸೆಂಬರ್ 2ರವರೆಗೆ ಸಿಬಿಐ ಕಸ್ಟಡಿ

Raghavendra Adiga

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಾಳೆ(ಡಿಸೆಂಬರ್ 2)ಯವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಇದಕ್ಕೆ ಮುನ್ನ  14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ  ರೋಷನ್ ಬೇಗ್ ಆರೋಗ್ಯ ಸಮಸ್ಯೆಯ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಸಿಬಿಐಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಲಲು ಆಗಿರಲಿಲ್ಲ.ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮತ್ತೆ ಜೈಲು ಸೇರಿದ್ದ ಬೇಗ್ ಅವರನ್ನು ತಮ್ಮ ಕಸ್ಟಡಿಗೆ ಕೊಡಬೇಕೆಂದು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದೆ. 

ಸಿಬಿಐ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಬೇಗ್ ಅವರನ್ನು ಒಂದು ದಿನದ ಮಟ್ಟಿಗೆ ಸಿಬಿಐ ಕಸ್ಟಡಿಗೆ ನೀಡಿದೆ. 

ಇತ್ತ ರೋಷನ್ ಬೇಗ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ಕ್ಕೆ ಮುಂದೂಡಿದೆ. 
 

SCROLL FOR NEXT