ರಾಜ್ಯ

ರಾಜ್ಯದಲ್ಲಿ ಇಂದು 1,440 ಮಂದಿಗೆ ಪಾಸಿಟಿವ್, 24 ಸಾವಿರ ಸಕ್ರೀಯ ಪ್ರಕರಣ!

Vishwanath S

ಬೆಂಗಳೂರು: ರಾಜ್ಯದಲ್ಲಿ ಇಂದು 1,440 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,87,667ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,808 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 983 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,51,690 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 24,150 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 712 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,71,204ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,156 ಮಂದಿ ಬಲಿಯಾಗಿದ್ದಾರೆ.

SCROLL FOR NEXT