ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಮೈಸೂರಿನಲ್ಲಿ ಹೆಚ್ಐವಿ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು ನಗರದಲ್ಲಿ ಕಳೆದ ಸಾಲಿಗೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನಲ್ಲಿ ಹೆಚ್ಐವಿ ಪೀಡಿತರ ಸಂಖ್ಯೆ ಇಳಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೈಸೂರು: ಮೈಸೂರು ನಗರದಲ್ಲಿ ಕಳೆದ ಸಾಲಿಗೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನಲ್ಲಿ ಹೆಚ್ಐವಿ ಪೀಡಿತರ ಸಂಖ್ಯೆ ಇಳಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಪ್ರಿಲ್ 2019 ರಿಂದ ಮೈಸೂರು ಜಿಲ್ಲೆಯಲ್ಲಿ ಹೊಸ ಎಚ್‌ಐವಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕೇವಲ 286 ರಷ್ಟಿದೆ, ಏಪ್ರಿಲ್ 2019 ಮತ್ತು ಮಾರ್ಚ್ 2020 ರ ನಡುವೆ 936ಕ್ಕೆ ಹೋಲಿಸಿದರೆ, ಈ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ. 

ಈ ನಡುವೆ ಪರೀಕ್ಷೆಯ ಸಂಖ್ಯೆ ಕಡಿಮೆಯಾಗಿರುವುದರಿಂದ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಕೊರೋನಾ ಸಾಂಕ್ರಾಮಿಕ ರೋಗದ ಪರಿಣಾಮ ಸಾಕಷ್ಟು ಜನರು ಪರೀಕ್ಷೆಗೊಳಗಾಗಲು ಹಿಂಜರಿಯುತ್ತಿದ್ದಾರೆಂದು ಹೇಳಲಾಗುತ್ತಿದೆ. 

ಡಿ.1ರ ವಿಶ್ವ ಏಡ್ಸ್ ದಿನಾಚರಣೆಯೆಂದು ಆಚರಿಸಲಾಗುತ್ತಿದ್ದು, ಇದರಂತೆ ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೆಚ್ಐವಿ ಸೋಂಕು ಪೀಡಿತರ ಕುರಿತು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. 

ಅಂಕಿ ಅಂಶಗಳಲ್ಲಿ 2020 ರ ಏಪ್ರಿಲ್‌ನಿಂದ ಜಿಲ್ಲೆಯಲ್ಲಿ 286 ಮಂದಿ ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆಂದು ತಿಳಿಸಿದೆ. 2019 ರ ಏಪ್ರಿಲ್ ಮತ್ತು ನವೆಂಬರ್ ನಡುವೆ 916 ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತದ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದನ್ನು ಸೂಚಿಸುತ್ತಿದೆ. 

ಆರೋಗ್ಯ ಇಲಾಖೆ ಈ ವರ್ಷ 13.23 ಲಕ್ಷ ಪರೀಕ್ಷೆಗಳನ್ನು ನಡೆಸಿದ್ದು, ಇದು 2019-20ರಲ್ಲಿ ಮಾಡಿದ 40.28 ಲಕ್ಷ ಪರೀಕ್ಷೆಗಳಲ್ಲಿ ಅರ್ಧಕ್ಕಿಂತ ಕಡಿಮೆಯಾಗಿದೆ. 2018-19ರಲ್ಲಿ ಮೈಸೂರು ಜಿಲ್ಲೆಯಲ್ಲಿ 1,022 ಹೊಸ ಎಚ್‌ಐವಿ ಪ್ರಕರಣಗಳು ಕಂಡುಬಂದಿದ್ದವು. ಕೋವಿಡ್ -19 ರ ಕಾರಣದಿಂದಾಗಿ ಜನರು ಆಸ್ಪತ್ರೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಿರುವುದರಿಂದ ಪರೀಕ್ಷೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. 

ಈ ನಡುವೆ ವೈದ್ಯಕೀಯ ಸಿಬ್ಬಂದಿಗಳನ್ನೂ ಕೂಡ  ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ಹೆಚ್ಐವಿ ಪರೀಕ್ಷೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಡ್ಸ್ ತಡೆಗಟ್ಟುವಿಕೆ ಕುರಿತು ಎನ್'ಜಿಒ ಸಂಸ್ಥೆಗಳೊಂದಿಗೆ ಕೆಲಸ ಮಾಡುವ ಸಮಾಜ ಸೇವಕಿ ರಿಷಿಕಾ ಬಾಲನ್ ಅವರು ಮಾತನಾಡಿ, ಪರೀಕ್ಷೆಯಲ್ಲಿನ ಕುಸಿತವು ಆತಂಕಕಾರಿಯಾಗಿದೆ, ಅದರಲ್ಲೂ ಪ್ರಮುಖವಾಗಿ ಜನರು ತಮ್ಮ ಸಾಮಾನ್ಯ ಜೀವನದತ್ತ ಮರಳುತ್ತಿರುವ ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆ ಕಳವಳವನ್ನುಂಟು ಮಾಡುತ್ತಿದೆ. ಅನೇಕ ಪ್ರಕರಣಗಳು ಪತ್ತೆಯಾಗದ ಕಾರಣ, ರೋಗ ಹರಡುವ ಮತ್ತು ಇತರರಿಗೆ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಸೋಂಕು ಹರಡುವುದನ್ನು ತಡೆಗಟ್ಟಲು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT