ರಾಜ್ಯ

ಸೂರು ಕಳೆದುಕೊಂಡ ಸಂತ್ರಸ್ತರಿಗೆ ತಿಂಗಳೊಳಗೆ 29 ಸಾವಿರ ರೂ. ಪರಿಹಾರ ನೀಡಿ: ಹೈಕೋರ್ಟ್

Manjula VN

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರೆಂದು ಸ್ಥಳೀಯ ವಲಸೆ ಕಾರ್ಮಿಕರನ್ನು ಬಲವಂತವಾಗಿ ತೆರವುಗೊಳಿಸಿದ ಪ್ರಕರಣದಲ್ಲಿ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕ ಶೆಟ್ ನಿರ್ಮಿಸಲು ನಿಗದಿಪಡಿಸಿರುವ ಮೊತ್ತವನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 

ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿಲಿವ್ ಲಿಬರ್ಟೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ  ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು. 

ಸಂತ್ರಸ್ತರಿಗೆ ಪರಿಹಾರ ಮೊತ್ತವಾದ ರೂ.14,100 ಹಾಗೂ ತಾತ್ಕಾಲಿಕ ಶೆಟ್ ನಿರ್ಮಿಸಿಕೊಡಲು ನಿಗದಿಪಡಿಸಿರುವೋ ರೂ.29,000 ನ್ನು ಒಂದು ತಿಂಗಳಿನಲ್ಲಿ ಪಾವತಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತೆ. ಅಲ್ಲದೆ, ಅರ್ಹ ಸಂತ್ರಸ್ತರು ಪರಿಹಾರ ಪಡೆಯಲು ತಮ್ಮ ಬ್ಯಾಂಕ್ ವಿವರಗಳನ್ನು ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

SCROLL FOR NEXT