ರಾಜ್ಯ

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ

Shilpa D

ಬೆಂಗಳೂರು: ಪೋಷಕರು ಶುಲ್ಕ ಪಾವತಿಸದ ಕಾರಣ ಖಾಸಗಿ ಶಾಲೆಗಳು ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದು ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಸಹ ತಲುಪಿವೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

ಶಿಕ್ಷಕರು ಉತ್ತಮವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದ್ದಾರೆ. ಆದರೆ, ಪೋಷಕರು ಶುಲ್ಕ ಪಾವತಿಸದ ಕಾರಣ ಶಾಲೆಗಳು ಅವರಿಗೆ ಕನಿಷ್ಠ ವೇತನವನ್ನು ಸಹ ಪಾವತಿ ಮಾಡಲು  ಆಗುತ್ತಿಲ್ಲ" ಎಂದು ಶಶಿಕುಮಾರ್ ಆರೋಪಿಸಿದ್ದಾರೆ.

ಖಾಸಗಿ ಶಾಲೆಗಳ ಬೆಂಬಲಕ್ಕೆ ಸರ್ಕಾರ ಬರುತ್ತಿಲ್ಲ. ಶಾಲೆಗಳಲ್ಲಿ ಶೇ 60ರಷ್ಟು ಪೋಷಕರು ವಿದ್ಯಾರ್ಥಿಗಳ ಶುಲ್ಕವನ್ನು ಕಟ್ಟಿಲ್ಲ. ರಾಜ್ಯದಲ್ಲಿರುವ 20 ಸಾವಿರ ಖಾಸಗಿ ಶಾಲೆಗಳ ಪೈಕಿ 18,000 ಶಾಲೆಗಳು ತಿಂಗಳ ಶುಲ್ಕದ ಮೇಲೆಯೇ ಕಾರ್ಯ ನಿರ್ವಹಣೆ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕ ಪಾವತಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ. ಇದರಿಂದಾಗಿ ಸಹಜವಾಗಿ ಗೊಂದಲ ಉಂಟಾಗಿದ್ದು, ಶಾಲೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಖಾಸಗಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಶಿಕ್ಷಕರ ಸಂಕಷ್ಟಗಳಿಗೆ ಸ್ಪಂದಿಸದೇ ದ್ವಂದ್ವ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

SCROLL FOR NEXT