ರಾಜ್ಯ

ರೈತರ 'ದೆಹಲಿ ಚಲೋ' ಪ್ರತಿಭಟನೆಗೆ ಬೆಂಬಲ; ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆ ತಡೆದು ಪ್ರತಿಭಟನೆ

Manjula VN

ಹೊಸಪೇಟೆ: ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಹಾಗೂ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಧರಣಿಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು‌ ಸೇನೆಯ ಕಾರ್ಯಕರ್ತರು ಹೊಸಪೇಟೆ-ಬಳ್ಳಾರಿ‌ ಹೆದ್ದಾರಿಯಲ್ಲಿ‌ ರಸ್ತೆತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ನವದೆಹಲಿಯಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಮಾತನಾಡಿ, ಕೋವಿಡ್ -19 ಲಾಕ್‌ ಡೌನ್‌ ಸಮಯದಲ್ಲಿ ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತಂದಿದೆ. ಇದನ್ನು ವಿರೋಧಿಸಿ ಪಂಜಾಬ್, ಹರಿಯಾಣ ಸೇರಿ ದೇಶದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ತಕ್ಕ ಸ್ಪಂದನೆ ಸರ್ಕಾರದಿಂದ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದರು.

SCROLL FOR NEXT