ವರ್ತೂರು ಪ್ರಕಾಶ್ 
ರಾಜ್ಯ

ಗೃಹ ಸಚಿವರು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವರ್ತೂರು ಪ್ರಕಾಶ್; ಭದ್ರತೆ ಒದಗಿಸುವಂತೆ ಮನವಿ

ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ಬೆಂಗಳೂರು: ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆಯಿದ್ದು, ತಮಗೆ ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಬೇಕು ಎಂದು‌ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ‌ ಮಾಡಿದ್ದೇನೆ ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಪ್ರಕರಣ ನಡೆದ ಬಗ್ಗೆ ಅವರಿಗೆ ವಿವರಿಸಿದ್ದೇನೆ. ತಮಗೆ ಮತ್ತು ಮಕ್ಕಳಿಗೆ ರಕ್ಷಣೆ ಬೇಕು ಎಂದು ಕೇಳಿದ್ದೇನೆ ಎಂದು ತಿಳಿಸಿದರು.

ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚನೆ
ಈ ನಡುವೆ ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣವನ್ನು ಭೇದಿಸಲು ವೈಟ್ ಫೀಲ್ಡ್ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಫಾರ್ಮ್ ಹೌಸ್ನಿಂದ ಬರುವಾಗ ಅಪಹರಿಸಿರುವುದಾಗಿ ದೂರಿನಲ್ಲಿ ಅವರು ತಿಳಿಸಿದ್ದು, ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಪಹರಣ ಸ್ಥಳ ಪರಿಶೀಲನೆ, ಅವರನ್ನು ಕಡೆಯದಾಗಿ ಅಪಹರಣಕಾರರು ಇಳಿಸಿದ ಹೊಸಕೋಟೆಯ ಶಿವನಾಪುರ ಬಳಿ ಸ್ಥಳ ಪರಿಶೀಲನೆ ಹಾಗೂ ಕಾರು ಪತ್ತೆಯಾದ ಬೆಳ್ಳಂದೂರು ಠಾಣಾ ವ್ಯಾಪ್ತಿಯ ಸ್ಥಳದಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. 

30 ಕೋಟಿ ರೂ.ಹಣಕ್ಕಾಗಿ ತನ್ನನ್ನು ಅಪಹರಿಸಲಾಗಿತ್ತು: ವರ್ತೂರು ಪ್ರಕಾಶ್ 
ತಮ್ಮನ್ನು ಹಣಕ್ಕಾಗಿ ಅಪಹರಿಸಿ, ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ವರ್ತೂರು ಪ್ರಕಾಶ್ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ.

ಹಣಕ್ಕಾಗಿ ದರೋಡೆಕೋರರ ತಂಡವೊಂದು ಕಾರಿನಲ್ಲಿ ಹೋಗುತ್ತಿದ್ದ ತಮ್ಮನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿಟ್ಟು ಚಿತ್ರಹಿಂಸೆ ನೀಡಿದೆ. ಈ ತಂಡ 30 ಕೋಟಿ ರೂ.ಹಣಕ್ಕಾಗಿ ಬೇಡಿಕೆ ಇಟ್ಟಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೋಲಾರದ ಬೆಗ್ಲಿಹೊಸಹಳ್ಳಿ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಬಳಿ ಕಾರು ಚಾಲಕ ಸುನೀಲ್ ಸಮೇತ ತಮ್ಮನ್ನು ನವೆಂಬರ್ 25ರಂದು ದುಷ್ಕರ್ಮಿಗಳ ತಂಡ ಅಪಹರಣ ಮಾಡಿದೆ. ನಂತರ ಕೈ ಕಾಲು ಕಟ್ಟಿ ಚಿತ್ರಹಿಂಸೆ ನೀಡಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಬಿಡುಗಡೆ ಮಾಡಲು 30 ಕೋಟಿ ರೂ.ಗೆ ತಂಡ ಬೇಡಿಕೆ ಇಟ್ಟಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: ಭಾರತದ ವಿರುದ್ಧ ಸ್ಫೋಟಕ ಶತಕ: Jacob Bethell ದಾಖಲೆಗಳ ಸುರಿಮಳೆ

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ': T20 ಇತಿಹಾಸದ ಅಪರೂಪದ ದಾಖಲೆ ಬರೆದ India vs England ಪಂದ್ಯ

SCROLL FOR NEXT