ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯ

Nagaraja AB

ಮಡಿಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ 
ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಪೊನ್ನಂಪೇಟೆಯ ಅರಣ್ಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಸಿ. ಪಾಟೀಲ್, ಚಿನ್ನದ ಅಭರಣಗಳನ್ನು ಧರಿಸಿದ ಮಹಿಳೆಯೊಬ್ಬರನ್ನು ಭೇಟಿಯಾಗಿ ಮಾತನಾಡಿಸಿದಾಗ, ಅಭರಣಗಳು ಭೂಮಿಯಿಂದ ಬಂದದ್ದು, ಹೊಲಗಳಲ್ಲಿ 35 ವರ್ಷಗಳಿಂದ ಬೇಸಾಯ ಮಾಡಿ ಇವುಗಳನ್ನು ಹೊಂದಲು ಸಾಧ್ಯವಾಯಿತು ಎಂದು ಹೇಳಿದರು. ಮಹಿಳೆಯರು ಕೃಷಿಯಿಂದ ಲಾಭ ಪಡೆಯುತ್ತಿರುವಾಗ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು, ನಿಜವಾದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದರು.

ಹೈನುಗಾರಿಕೆ, ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು, ಭತ್ತ ಬೆಳೆಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಆದಾಗ್ಯೂ, ಆತ್ಮಹತ್ಯೆ ಕುರಿತು ಅವರು ನೀಡಿರುವ ಹೇಳಿಕೆಗೆ ರೈತ ಸಮುದಾಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

SCROLL FOR NEXT