ಬಿಸಿ ಪಾಟೀಲ್ 
ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ. ಪಾಟೀಲ್ ವಿವಾದಾತ್ಮಕ ಹೇಳಿಕೆ

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೖಷಿ ಸಚಿವ ಬಿ.ಸಿ.ಪಾಟೀಲ್ ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೖಷಿ ಸಚಿವ ಬಿ.ಸಿ.ಪಾಟೀಲ್ ಗುರುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದು ಹೇಳಿದರು. 

ಭೂಮಿಯನ್ನು ನಂಬಿಕೊಂಡು ಜೀವನದಲ್ಲಿ ಮುಂದೆ ಬಂದ ಅನೇಕರು ನಮ್ಮ ಮುಂದಿದ್ದಾರೆ. ಹೀಗಿರುವಾಗ ಸಮಸ್ಯೆ ಇದೆ ಎಂದು ಸಾವಿಗೆ ಶರಣಾಗುವುದು ಎಷ್ಟು ಸರಿ? ಎಂದು ಸಚಿವ ಪಾಟೀಲ್ ಪ್ರಶ್ನಿಸಿದರು.

ಈಸಬೇಕು, ಇದ್ದು ಜಯಿಸಬೇಕು ಎಂದು ಸಂದೇಶ ನೀಡಿದ ಸಚಿವ ಪಾಟೀಲ್, ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಅದು ಹೇಡಿಗಳ ಕೆಲಸ. ಸಕಾ೯ರ ಸದಾ ರೈತರ ನೆರವಿಗೆ ಬದ್ಧವಾಗಿದೆ, ಯಾರೂ ಸಮಸ್ಯೆಗಳಿಗೆ ಹೆದರಬೇಕಾಗಿಲ್ಲ ಎಂದು ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ