ರಾಜ್ಯ

ಮಂಗಳೂರಿನಲ್ಲಿ ಪೊಲೀಸ್ ಗೋಲಿಬಾರ್: ನ್ಯಾಯಾಂಗ ತನಿಖೆ ವರದಿ ಸರ್ಕಾರಕ್ಕೆ ಸಲ್ಲಿಕೆ

Lingaraj Badiger

ಮಂಗಳೂರು: ನಗರದಲ್ಲಿ ಕಳೆದ ವರ್ಷ ಡಿಸೆಂಬರ್ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್ ಕುರಿತು ನ್ಯಾಯಾಂಗ ತನಿಖೆಯ ನೇತೃವವನ್ನು ವಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಶನಿವಾರ ಅಂತಿಮ ತನಿಖಾ ವರದಿಯನ್ನು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಿದ್ದಾರೆ.

ಜಗದೀಶ್ ಅವರು ಅವರು 50 ಪುಟದ ವರದಿಯೊಂದಿಗೆ 2,500 ಪೂರಕ ದಾಖಲೆಗಳನ್ನು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆ ಹಿಂಸಾರೂಪ ತಳೆದ ನಂತರ ಪೊಲೀಸರು ಗೋಲಿಬಾರ್ ನಡೆಸಿದ್ದರು. ಗೋಲಿಬಾರ್ ನಲ್ಲಿ ನೌಶೀನ್ ಮತ್ತು ಜಲೀಲ್ ಎಂಬ ಇಬ್ಬರು ಯುವಕರು ಗುಂಡೇಟಿಗೆ ಬಲಿಯಾಗಿದ್ದರು. ಕೋವಿಡ್ -19 ಸಾಂಕ್ರಾಮಿಕ ಮತ್ತು ಲಾಕ್ ಡೌನ್ ಕಾರಣದಿಂದ ಗೋಲಿಬಾರ್ ಕುರಿತ ನ್ಯಾಯಾಂಗ ತನಿಖೆ ವಿಳಂಬವಾಗಿತ್ತು.

ಗೋಲಿಬಾರ್ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 32 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಅವರಲ್ಲಿ 21 ಆರೋಪಿಗಳಿಗೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶ ಶರತ್‌ ಅರವಿಂದ್‌ ಬೋಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಷರತ್ತು ಬದ್ಧ ಜಾಮೀನು ನೀಡಿದೆ.

SCROLL FOR NEXT