ರಾಜ್ಯ

ಸರಿಯಾದ ರಸ್ತೆಗಳಿಲ್ಲ, ಕುಡಿಯುವ ನೀರಿಲ್ಲ: ನಾವೇಕೆ ಮತದಾನ ಮಾಡಬೇಕು?: ಗದಗ ಗ್ರಾಮಸ್ಥರ ಆಕ್ರೋಶ

Shilpa D

ಗದಗ: ರೋಣ ತಾಲೂಕಿನ ಜಿಗಳೂರು ಮತ್ತು ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ಮೂಲಭೂತ ಸೌಕರ್ಯಗಳಾದ ಸರಿಯಾದ ರಸ್ತೆ. ಒಳಚರಂಡಿ ವ್ಯವಸ್ಥೆ, ಮತ್ತು ಸ್ವಚ್ಛ ಕುಡಿಯುವ ನೀರು ಒದಗಿಸಬೇಕೆಂದು ಸ್ಥಳೀಯ ಆಡಳಿತಕ್ಕೆ ಒತ್ತಾಯಿಸಿದ್ದಾರೆ. ಕಳೆದ ಗ್ರಾಮ ಪಂಚಾಯತಿ ಚುನಾವಣೆಯಿಂದ ಮೂಲ ಭೂತ ಸೌಕರ್ಯಗಳ ಸಮಸ್ಯೆ ಬಗೆಹರಿಸಲಿಲ್ಲ ಹೀಗಾಗಿ ಚುನಾವಣೆ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಪದೇ ಪದೇ  ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ,ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಲು ವಿಫಲರಾಗಿದ್ದಾರೆ. ಶುಕ್ರವಾರ ಕೂಡ ಗ್ರಾಮಸ್ಥರು ಪಿಡಿಓಗೆ ಮೆಮೋರಂಡಮ್ ಸಲ್ಲಿಸಿ, ಚುನಾವಣೆ ಬಹಿಷ್ಕರಿಸುವುದಾಗಿ ಮಾಹಿತಿ ನೀಡಿದ್ದಾರೆ.

ತಮ್ಮ ಸಮಸ್ಯೆಗಳನ್ನು ಈಡೇರಿಸಿದಿದ್ದರೇ ಗ್ರಾಮಪಂಚಾಯತ್ ಕಚೇರಿ ಮುಂದೆ ಮುಳ್ಳಿನ ಗಿಡ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ರೋಣದಲ್ಲಿ ಹೊಸಹಳ್ಳಿ ಸೇರಿದಂತೆ 10 ಗ್ರಾಮಗಳು ಎಲ್ಲವೂ ಅಭಿವೃದ್ಧಿ ಆಗಬೇಕಿದೆ, ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ, ಇಲ್ಲಿ ಪಿಡಿಒಗಳು ಪದೇ ಪದೇ ವರ್ಗಾವಣೆ ಆಗುತ್ತಿದ್ದಾರೆ, ಹೀಗಾಗಿ  ಗ್ರಾಮ ಪಂಚಾಯತ್ ಚುನಾವಣೆ ಕಚೇರಿಯನ್ನು ಜಿಗಳೂರಿಗೆ ಶಿಫ್ಟ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕಳೆದ ಬಾರಿಯೂ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಬೆದರಿಕೆ ಹಾಕಿದ್ದರು, ಆದರೆ ನಂತರ ಮನವೊಲಿಸಿ ಚುನಾವಣೆಯಲ್ಲಿ ಭಾಗವಹಿಸಿದರು. ಆದರೆ ಬಾರಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ. ಸಾವಿರಾರು ಮಂದಿ ಸಹಿ ಸಂಗ್ರಹಿಸಿದ್ದು ಜಿಗಳೂರು ಗ್ರಾಮಪಂಚಾಯಿತಿ ಬದಲಾವಣೆಗೆ ಒತ್ತಾಯಿಸಿದ್ದಾರೆ.

SCROLL FOR NEXT