ಸಿಲಿಕಾನ್ ಸಿಟಿಯಲ್ಲಿ 733 ಸೇರಿ ರಾಜ್ಯದಲ್ಲಿಂದು 1,321 ಮಂದಿಗೆ ಕೊರೋನಾ ಪಾಸಿಟಿವ್, 10 ಬಲಿ!
ರಾಜ್ಯದಲ್ಲಿ ಇಂದು 1,321 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,93,006ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು 1,321 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,93,006ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,856 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 889 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,55,750 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,381 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 733 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,74,024ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,183 ಮಂದಿ ಬಲಿಯಾಗಿದ್ದಾರೆ.