ವಾಯುವಜ್ರ ಬಸ್ 
ರಾಜ್ಯ

ವಾಯುವಜ್ರ ಮುಂಗಡ ಬುಕ್ಕಿಂಗ್ ಆರಂಭಿಸಿದ ಬಿಎಂಟಿಸಿ

ಹವಾನಿಯಂತ್ರಿತ ವಾಯುವಜ್ರ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮುಂಗಡ ಬುಕ್ಕಿಂಗ್ ಸೇವೆ ಪುನಾರಂಭಿಸಿದೆ.

ಬೆಂಗಳೂರು: ಹವಾನಿಯಂತ್ರಿತ ವಾಯುವಜ್ರ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮುಂಗಡ ಬುಕ್ಕಿಂಗ್ ಸೇವೆ ಪುನಾರಂಭಿಸಿದೆ.

ಹೌದು ವಾಯುವಜ್ರ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲು ಕೆಎಸ್ಆರ್‌ಟಿಸಿ ನಿಗಮದ ಅವತಾರ್ ತಂತ್ರಾಂಶದಲ್ಲಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೆಂಗಳೂರು ನಗರದ ವಿವಿಧ ಸ್ಥಳಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (164 ಟ್ರಿಪ್) ಹಾಗೂ ಕೆಂಪೇಗೌಡ ಅಂತರ್‍ರಾಷ್ಟ್ರಿಯ ವಿಮಾನ ನಿಲ್ದಾಣದಿಂದ ನಗರದ ವಿವಿಧ ಸ್ಥಳಗಳಿಗೆ (171 ಟ್ರಿಪ್) ಪ್ರತಿನಿತ್ಯ ಒಟ್ಟು 335 ಏಕಮುಖ ಟ್ರಿಪ್ ಮೂಲಕ ಹವಾನಿಯಂತ್ರಿತ ವಾಯುವಜ್ರ ಬಸ್‍ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಬಸ್ ನಲ್ಲಿ ಟಿಕೆಟ್ ನೀಡುವಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಮುಂಗಡವಾಗಿ ಆಸನಗಳನ್ನು ಕೆಎಸ್ಆರ್‌ಟಿಸಿ ಬುಕ್ಕಿಂಗ್ ಕೌಂಟರ್ ಗಳು, ಆನ್‍ಲೈನ್ www.ksrtc.in ಕೆಎಸ್ಸಾರ್ಟಿಸಿ ಮೊಬೈಲ್ ಆಪ್ ಹಾಗೂ ಅಧಿಕೃತ ಖಾಸಗಿ ಏಜೆನ್ಸಿಗಳ ಮೂಲಕ ಕಾಯ್ದಿರಿಸಬಹುದು. ಪ್ರಯಾಣಿಕರು ಪ್ರಯಾಣಿಸುವ ಸಮಯದಲ್ಲಿ ಚಾಲ್ತಿಯಲ್ಲಿರುವ ಮುದ್ರಿತ ಟಿಕೆಟ್, ಇ-ಟಿಕೇಟ್, ಬುಕ್ಕಿಂಗ್ ಎಸ್‍ಎಂಎಸ್ ಹೊಂದಿರಬೇಕು ಎಂದು ಬಿಎಂಟಿಸಿ ಹೇಳಿದೆ.

ರಿಯಾಯಿತಿ
ಒಂದೇ ಗುಂಪಿನ 4 ಅಥವಾ ಅಧಿಕ ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿದಲ್ಲಿ, ಪ್ರಯಾಣದರದಲ್ಲಿ ಶೇ.5 ರಷ್ಟು ರಿಯಾಯಿತಿಯನ್ನು ಇ-ಬುಕ್ಕಿಂಗ್ ಸಮಯದಲ್ಲಿ ನೀಡಲಾಗುತ್ತದೆ. ಪ್ರಯಾಣ ಆರಂಭಿಸುವ ಹಾಗೂ ಹಿಂದಿರುಗುವ ಪ್ರಯಾಣಕ್ಕೆ ಒಮ್ಮೆಲೇ ಮುಂಗಡವಾಗಿ ಆಸನವನ್ನು ಕಾಯ್ದಿರಿಸಿದಲ್ಲಿ, ಹಿಂದಿರುಗುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿಯನ್ನು ಇ-ಬುಕ್ಕಿಂಗ್ ಸಮಯದಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT