ರಾಜ್ಯ

ಬೇಲದಕುಪ್ಪೆ ಮಹದೇಶ್ವರ ಜಾತ್ರೆ ಆಚರಣೆ, ಸಾರ್ವಜನಿಕರಿಗೆ ನಿರ್ಬಂಧ: ರೋಹಿಣಿ ಸಿಂಧೂರಿ ಆದೇಶ

Srinivas Rao BV

ಮೈಸೂರು: ಕೋವಿಡ್ 19 ಸೋಂಕು ನಿಯಂತ್ರಣ ಉದ್ದೇಶದಿಂದ ಬೇಲದಕುಪ್ಪೆ ಮಹದೇಶ್ವರ ಜಾತ್ರೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಡಿಸೆಂಬರ್ 13 ರಿಂದ 16 ವರೆಗೆ ನಡೆಯುವ ಜಾತ್ರೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಭಂದ ಹೇರಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.  ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಜಾತ್ರೆ ಇದಾಗಿದೆ. ಬಂಡಿಪುರ ಅರಣ್ಯ ವ್ಯಾಪ್ತಿ ಯಡಿಯಾಲ ವಲದ ಅರಣ್ಯದೊಳಗೆ ಬೇಲದಕುಪ್ಪೆ ಮಹದೇಶ್ವರ ದೇವಾಲಯ ಇದೆ. ಈ ಬಾರಿ ಜಾತ್ರೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಧಾರ್ಮಿಕ ವಿಧಿ ವಿಧಾನದಂತೆ ಸರಳ ಆಚರಣೆಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನ ಜಾತ್ರೆಯಲ್ಲಿ ಭಾಗವಹಿಸುತ್ತಿದ್ದರು.  ವನ್ಯಜೀವಿ ಹಾಗೂ ಜನಾರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಈ ಬಾರಿ ಸೀಮಿತ ಪ್ರಮಾಣದಲ್ಲಿ ಜಾತ್ರೆಗೆ ಅವಕಾಶ ಕಲ್ಪಿಸಲಾಗಿದೆ.

SCROLL FOR NEXT