ಬೆಂಗಳೂರಿನಲ್ಲಿ 501 ಸೇರಿ ರಾಜ್ಯದಲ್ಲಿಂದು 998 ಮಂದಿಗೆ ಕೊರೋನಾ ಪಾಸಿಟಿವ್, 11 ಬಲಿ!
ರಾಜ್ಯದಲ್ಲಿ ಇಂದು 998 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು 998 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,94,004ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,867 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,601 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,58,952 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 24,767 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 501 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,74,525ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,190 ಮಂದಿ ಬಲಿಯಾಗಿದ್ದಾರೆ.