ಸಂಗ್ರಹ ಚಿತ್ರ 
ರಾಜ್ಯ

ಹೋಟೆಲ್ ನಲ್ಲಿ ನಿಶ್ಚಿತಾರ್ಥ: ಲಿಫ್ಟ್ ಗುಂಡಿಗೆ ಬಿದ್ದು ವರನ ತಂದೆ ಸಾವು

ಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಹೋಟೆಲ್ ನಲ್ಲಿ ಮಗನ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯ ತಪ್ಪಿ ಹೋಟೆಲ್ ನ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಎಲೇಕೊಡಿಗೇನಹಳ್ಳಿ ನಿವಾಸಿ ಮಂಜುನಾಥ್ (60) ಮೃತಪಟ್ಟವರು. ಅವರ ಪುತ್ರ ದರ್ಶನ್ ಅವರ ಮದುವೆ ದೊಡ್ಡಬಳ್ಳಾಪುರದ ಕಂಟನಕುಂಟೆಯ ಶಿಲ್ಪಾ ಎಂಬುವವರ ಜೊತೆ ನಿಶ್ಚಯವಾಗಿತ್ತು.

ಭಾನುವಾರ ಸಮೃದ್ಧಿ ಗ್ರ್ಯಾಂಡ್ ಹೊಟೇಲ್ ನ ಮೂರನೇ ಮಹಡಿಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನಿನ್ನೆ ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ವರನ ತಂದೆ ಮಂಜುನಾಥ್ ಮೂರನೇ ಮಹಡಿಯಲ್ಲಿ ಆಯ ತಪ್ಪಿ ಲಿಫ್ಟ್ ಗುಂಡಿಗೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಅವರು ಸಾವನ್ನಪ್ಪಿದ್ದಾರೆ. ಮಂಜುನಾಥ್ ಅವರ ಸಾವಿಗೆ ಹೊಟೇಲ್ ಮಾಲೀಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಕೆಲವು ದಿನಗಳಿಂದ ಹೊಟೇಲ್ ನ ಮೂರು ಮಹಡಿಗಳಿಗೆ ಲಿಫ್ಟ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಮೆಟ್ಟಿಲ ಬಳಿಯೇ ಲಿಫ್ಟ್ ಅಳವಡಿಸುವ ಕಾರ್ಯ ನಡೆದಿತ್ತು.  

ದೊಡ್ಡಬಳ್ಳಾಪುರ  ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ