ರಾಜ್ಯ

ಮೈಸೂರು: ಲಾರಿ ಡಿಕ್ಕಿ: ಬೈಕ್ ಸವಾರ ಸಾವು

Srinivasamurthy VN

ಮೈಸೂರು: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ಸಂಭವಿಸಿದೆ.

ಬೆಂಗಳೂರು ಮೂಲದ ರಾಜು (19 ವರ್ಷ) ಮೃತ ದುರ್ದೈವಿ‌. ಘಟನೆಯಲ್ಲಿ ಹಿಂಬದಿ ಸವಾರ ತರುಣ್ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.

ಮೂಲಗಳ ಪ್ರಕಾರ ನಿನ್ನೆ ರಾತ್ರಿ ರಾಜು ಮತ್ತು ಸ್ನೇಹಿತ ತರುಣ್ ಒಂದೇ ಬೈಕ್​ನಲ್ಲಿ ಸ್ನೇಹಿತನ ಮನೆಗೆ ಹೋಗುತ್ತಿದ್ದರು. ಈ ವೇಳೆ ಯಮನಂತೆ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರ ರಾಜುವಿನ ರುಂಡ ಛಿದ್ರ ಛಿದ್ರವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನು ಹಿಂಬದಿ ಕುಳಿತಿದ್ದ ತರುಣ್​ಗೆ ತೀವ್ರ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವೆಸಗಿ ಲಾರಿ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

SCROLL FOR NEXT