ರಾಜ್ಯ

ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ: ಗೋವಿಂದ ಕಾರಜೋಳ

Manjula VN

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ. 

ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. 

ಪಟ್ಟಣಗಳು ಮತ್ತು ನಗರಗಳ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಣೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಈ ಹಿಂದೆಯೇ ರಾಜ್ಯ ಸರ್ಕಾರ ಆದೇಶಿಸಿತ್ತು. ಆದೇಶಕ್ಕೂ ಮುನ್ನವೇ ಸ್ಥಳೀಯ ಸಂಸ್ಥೆಗಳು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ವಹಣೆ ಮಾಡುತ್ತಿತ್ತು ಎಂದು ಹೇಳಿದ್ದಾರೆ. 

ಬಳಿಕ ಮಾತನಾಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಗೆ ಸ್ಥಳೀಯ ಸಂಸ್ಥೆಗಳ ಬಳಿ ಹಣವಿರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ನಿರ್ವಹಿಸಲು ಸಂಸ್ಥೆಗಳಿಗೆ ಕಷ್ಟಕರವಾಗಬಹುದು. ಹೀಗಾಗಿ ಇಂಹ ಸಂಸ್ಥೆಗಳಿಗೆ ಅನುದಾನ ನೀಡಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ತಿಳಿಸಿದರು. 

SCROLL FOR NEXT