ರಾಜ್ಯದಲ್ಲಿಂದು ಕೊರೋನಾಗೆ 20 ಬಲಿ, ಬೆಂಗಳೂರಿನಲ್ಲಿ 728 ಸೇರಿ 1,279 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,279 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,96,563ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 1,279 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,96,563ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,900 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 3,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,59,588 ಏರಿಕೆಯಾಗಿದೆ. ಇನ್ನು 23,056 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 728 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,75,891ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 13 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,210 ಮಂದಿ ಬಲಿಯಾಗಿದ್ದಾರೆ.