ರಾಜ್ಯ

ಭೀಕರ ರಸ್ತೆ ಅಪಘಾತ: ಮೂವರು ಸಾವು

Manjula VN

ಮೈಸೂರು: ದ್ವಿಚಕ್ರ ವಾಹನ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಬಳಿ ನಡೆದಿದೆ.

ರಮೇಶ್ (40), ಉಷಾ (36), ಮೊನಿಷಾ (5) ಮೃತ ದುರ್ದೈವಿಗಳು. ಮೃತರೆಲ್ಲರೂ ಮೈಸೂರಿನ ಟಿ ಕೆ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ 3 ವರ್ಷದ ಸಿದ್ಧಾರ್ಥಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT