ಸಾಂದರ್ಭಿಕ ಚಿತ್ರ 
ರಾಜ್ಯ

ಬೇಡಿಕೆಗೆ ಸ್ಪಂದಿಸದ ಸರ್ಕಾರ: ಕೋವಿಡ್-19 ಕರ್ತವ್ಯಕ್ಕೆ ಬಹಿಷ್ಕಾರ ಹಾಕಲು ಸ್ಥಳೀಯ ವೈದ್ಯರುಗಳು ಮುಂದು 

ವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಸ್ಥಳೀಯ ವೈದ್ಯರುಗಳು, ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು ಅವುಗಳನ್ನು ಈಡೇರಿಸದಿದ್ದರೆ ಕೋವಿಡ್-19 ಕರ್ತವ್ಯಕ್ಕೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಸ್ಥಳೀಯ ವೈದ್ಯರುಗಳು, ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು ಅವುಗಳನ್ನು ಈಡೇರಿಸದಿದ್ದರೆ ಕೋವಿಡ್-19 ಕರ್ತವ್ಯಕ್ಕೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಗೆ ಬರೆದಿರುವ ಪತ್ರದಲ್ಲಿ ಕರ್ನಾಟಕ ಸ್ಥಳೀಯ ವೈದ್ಯರುಗಳ ಒಕ್ಕೂಟ, ವೈದ್ಯಕೀಯ ವಿದ್ಯಾರ್ಥಿಗಳು, ಹೌಸ್ ಸರ್ಜನ್ ಗಳು ಹಲವು ತಿಂಗಳುಗಳಿಂದ ಕೋವಿಡ್ 19 ಕರ್ತವ್ಯದಲ್ಲಿದ್ದು ಇದರಿಂದ ಅವರ ವೈದ್ಯಕೀಯ ಶಿಕ್ಷಣ ಕಲಿಕೆಗೆ ಹಿನ್ನೆಡೆಯಾಗುತ್ತಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಟ್ಯೂಷನ್ ಶುಲ್ಕವನ್ನು ಸರ್ಕಾರ ಮನ್ನಾ ಮಾಡಬೇಕು, ತಮ್ಮ ಕೋವಿಡ್ ಸೇವೆಗಳನ್ನು ಗುರುತಿಸಿ ಕೋವಿಡ್ ಅಪಾಯ ಭತ್ಯೆಯನ್ನು ನೀಡಬೇಕು ಎಂದು ಒತ್ತಾಯಿಸಿದೆ. ಈ ಒಕ್ಕೂಟದಲ್ಲಿ ಸುಮಾರು 5 ಸಾವಿರ ಸ್ಥಳೀಯ ವೈದ್ಯರುಗಳಿದ್ದಾರೆ.

ಕರ್ನಾಟಕ ಸ್ಥಳೀಯ ವೈದ್ಯರುಗಳ ಒಕ್ಕೂಟದ ಅಧ್ಯಕ್ಷ ದಯಾನಂದ್ ಸಾಗರ್ ಮಾತನಾಡಿ, ಸೈಪಂಡ್ ವಿಚಾರದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಪ್ರಧಾನ ಕಾರ್ಯದರ್ಶಿಗಳಿಂದ ತಮಗೆ ಭರವಸೆ ಸಿಕ್ಕಿದ್ದು, ಬೇರೆ ಯಾವ ಬೇಡಿಕೆಗಳಿಗೂ ಮನ್ನಣೆ ಸಿಕ್ಕಿಲ್ಲ ಎಂದರು.

ಕೋವಿಡ್-19 ಸೇವೆಗೆ ತಮ್ಮನ್ನು ಅಗ್ಗದ ಕಾರ್ಮಿಕರಾಗಿ ಪರಿಗಣಿಸಿದ್ದಾರೆ ಎನಿಸುತ್ತಿದ್ದು, ತಮ್ಮ ಕೈಯಿಂದ ದೀರ್ಘ ಸಮಯದವರೆಗೆ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ನಮ್ಮ ಸೇವೆಯನ್ನು ಪರಿಗಣಿಸಿ ವಿಶೇಷ ಗೌರವ ನೀಡುವುದು ಯಾವಾಗ ಎಂದು ಮತ್ತೊಬ್ಬ ವೈದ್ಯರು ಪ್ರಶ್ನಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ