ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ 11 ಬಲಿ, ಬೆಂಗಳೂರಿನಲ್ಲಿ 606 ಸೇರಿ 1,203 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶನಿವಾರ 1,203 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 900214ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,939 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 1531 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,70,002ಕ್ಕೆ ಏರಿಕೆಯಾಗಿದೆ. ಇನ್ನು 18,254 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 244 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 606 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,77,857ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,203 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬಾಗಲಕೋಟೆ 8, ಬಳ್ಳಾರಿ 23, ಬೆಳಗಾವಿ 26, ಬೆಂಗಳೂರು ಗ್ರಾಮಾಂತರ 23, ಬೀಧರ್ 16, ಚಾಮರಾಜನಗರ 20, ಚಿಕ್ಕಮಗಳೂರು 12, ಚಿತ್ರದುರ್ಗ 51, ದಕ್ಷಿಣ ಕನ್ನಡ 53, ದಾವಣಗೆರೆ 13, ಧಾರವಾಡ 10, ಗದಗ 6, ಹಾಸನ 26, ಹಾವೇರಿ 7, ಕಲಬುರಗಿ 13, ಕೊಡಗು 19, ಕೋಲಾರ 10, ಕೊಪ್ಪಳ 12, ಮಂಡ್ಯ 25, ಮೈಸೂರು 59, ರಾಯಚೂರು 5, ರಾಮನಗರ 2, ಶಿವಮೊಗ್ಗ 18, ತುಮಕೂರು 30, ಉಡುಪಿ 21, ಉತ್ತರ ಕನ್ನಡ 20, ವಿಜಯಪುರ 18 ಹಾಗೂ ಯಾದಗಿರಿ 12 ಪ್ರಕರಣಗಳು ಪತ್ತೆಯಾಗಿವೆ.

SCROLL FOR NEXT