ಸಾಂದರ್ಭಿಕ ಚಿತ್ರ 
ರಾಜ್ಯ

ಕಸ್ತೂರಿ ರಂಗನ್ ವರದಿಯಿಂದ ಕರ್ನಾಟಕವನ್ನು ಹೊರಗಿಡಿ: ಸರ್ಕಾರಕ್ಕೆ ರೈತರ ಆಗ್ರಹ

ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ತಡೆಯಬೇಕು. ರಾಷ್ಟ್ರೀಯ ಹಸಿರು ಪೀಠಕ್ಕೆ ಪುನರ್ ಪರಿಶೀಲನಾ ಪ್ರಮಾಣಪತ್ರ ಸಲ್ಲಿಸಲು ವಿನಂತಿಸಬೇಕು ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಆಗ್ರಹಿಸಿದೆ.

ಶಿವಮೊಗ್ಗ: ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರ ತಡೆಯಬೇಕು. ರಾಷ್ಟ್ರೀಯ ಹಸಿರು ಪೀಠಕ್ಕೆ ಪುನರ್ ಪರಿಶೀಲನಾ ಪ್ರಮಾಣಪತ್ರ ಸಲ್ಲಿಸಲು ವಿನಂತಿಸಬೇಕು ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಆಗ್ರಹಿಸಿದೆ.

2014ರ ಲೋಕಸಭಾ ಚುನಾವಣೆ ವೇಳೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯದಲ್ಲಿ ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿ ನೀಡಿದ ಭರವಸೆ ಸುಳ್ಳಾಗಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಸಂಚಾಲಕ ಬಿ.ಎ.ರಮೇಶ್‌ ಹೆಗ್ಡೆ ಒತ್ತಾಯಿಸಿದ್ದಾರೆ.

ನಾಲ್ಕು ಬಾರಿ ಕೇಂದ್ರ ಸರ್ಕಾರ ರಾಜ್ಯದ 1,573 ಗ್ರಾಮಗಳನ್ನು ಒಳಗೊಂಡ ಪಶ್ಚಿಮಘಟ್ಟ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ವಲಯ’ ಅಧಿಸೂಚನೆ ಹೊರಡಿಸಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. 

ಕೇಂದ್ರದ ಅರಣ್ಯ ಹಾಗೂ ಪರಿಸರ ಸಚಿವ ಪ್ರಕಾಶ್ ಜಾವಡೆಕರ್ ಅವರು ರಾಷ್ಟ್ರೀಯ ಹಸಿರು ಪೀಠಕ್ಕೆ ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದರ ಫಲವಾಗಿ ಹಸಿರು ಪೀಠ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

2014ರಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿಲ್ಲ. ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಬಿಜೆಪಿ ನಾಯಕರಿಗೆ ಚುನಾವಣಾ ಸಮಯದಲ್ಲಿ ಕಸ್ತೂರಿ ರಂಗನ್ ವರದಿ ನೆನಪಾಗುತ್ತದೆ. 

ಬಿ.ವೈ.ರಾಘವೇಂದ್ರ ಅವರು ಸಂಸದರಾಗಿ 7 ವರ್ಷ ಕಳೆದರೂ, ಒಮ್ಮೆಯೂ ಲೋಕಸಭಾ ಅಧಿವೇಶನದಲ್ಲಿ ವರದಿ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರಲ್ಲಿ ಈ ವರದಿ ತಿರಸ್ಕರಿಸುವಂತೆ ಕ್ಯಾಬಿನೆಟ್ ನಿರ್ಣಯ ಕೈಗೊಂಡು ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿತ್ತು. ಆದರೂ, ಕೇಂದ್ರ ಪ್ರಮಾಣಪತ್ರ ಸಲ್ಲಿಸಿತ್ತು ಎಂದು ಖಂಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT