ಬೆಂಗಳೂರು: ಗ್ರಾಮ ಪಂಚಾಯಿತಿ ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು, ಒಟ್ಟು 3267 ನಾಮಪತ್ರಗಳು ಸಲ್ಲಿಕೆಯಾಗಿದೆ.
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು (ದಿನಾಂಕ: 07.12.2020 ರಿಂದ 11.12.2020ರವರೆಗೆ) ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳ ಪೈಕಿ 3267 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, ನೆಲಮಂಗಲದ 21 ಸ್ಥಾನಗಳಿಗೆ ಮಾತ್ರ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.
ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಅನುಸೂಚಿತ ಜಾತಿ-441, ಅನುಸೂಚಿತ ಪಂಗಡ-86, ಹಿಂದುಳಿದ ಎ ವರ್ಗ-254, ಹಿಂದುಳಿದ ಬಿ ವರ್ಗ-62, ಸಾಮಾನ್ಯ ವರ್ಗ-1005, ಒಟ್ಟು-1848 ನಾಮಪತ್ರ ಸಲ್ಲಿಕೆಯಾಗಿದ್ದು, ಯಾವುದೇ ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿರುವುದಿಲ್ಲ.
ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಅನುಸೂಚಿತ ಜಾತಿ-389, ಅನುಸೂಚಿತ ಪಂಗಡ-66, ಹಿಂದುಳಿದ ಎ ವರ್ಗ-174, ಹಿಂದುಳಿದ ಬಿ ವರ್ಗ-34, ಸಾಮಾನ್ಯ ವರ್ಗ-755, ಒಟ್ಟು-1419 ನಾಮಪತ್ರ ಸಲ್ಲಿಕೆಯಾಗಿದ್ದು, 21 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.