ರಾಜ್ಯ

ರಾಜ್ಯದಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ

Manjula VN

ಬೆಂಗಳೂರು: ಕಳೆದ ಹಲವು ತಿಂಗಳುಗಳಿಂದರೂ ರಾಜ್ಯದಲ್ಲಿ ಭೀತಿ, ಅಭದ್ರತೆಗೆ ಕಾರಣವಾಗಿದ್ದ ಕೊರೋನಾ ಸೋಂಕು ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ರಾಜ್ಯದಲ್ಲಿ ಇದೀಗ ಕೊರೋನಾ ಸಾವಿನ ಪ್ರಮಾಣ ಶೇ.1ಕ್ಕೆ ಇಳಿದಿದೆ. 

ಬಿಬಿಎಂಪಿ ವಾರ್ ರೂಮ್ ನೀಡಿರುವ ಅಂಕಿಅಂಶಗಳ ಪ್ರಕಾರ ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ ಸಾವಿನ ಪ್ರಮಾಣ ಶೇ.1.2ಕ್ಕೆ ಇಳಿದಿದೆ. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿಯೇ ಇರುವುದು ತಿಳಿದುಬಂದಿದೆ. 

ಬೀದರ್ (12.5%), ದಕ್ಷಿಣ ಕನ್ನಡ (5.1%), ಬಳ್ಳಾರಿ (2.8%), ಧಾರವಾಡ (2.3%) ಮತ್ತು ಕೋಲಾರ (2.1%) ಇರುವುದು ವರದಿಗಳು ತಿಳಿಸಿವೆ. 

ಜಿಲ್ಲಾ ಮಟ್ಟದಲ್ಲಿ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಿದರೆ, ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡುವ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು. ಬೆಂಗಳೂರು ನಗರದಲ್ಲಿ ಪ್ರತೀನಿತ್ಯ 30,000 ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಇತರೆ ಜಿಲ್ಲೆಗಳಲ್ಲಿ ಕೇವಲ 4,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

SCROLL FOR NEXT