ರೈಲಿಗೆ ತಲೆಕೊಟ್ಟು ಪೊಲೀಸ್ ಪೇದೆ ಆತ್ಮಹತ್ಯೆ
ರೈಲಿಗೆ ತಲೆಕೊಟ್ಟು ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣ ಬಳಿ ಶನಿವಾರ ಬೆಳಿಗ್ಗೆ ವರದಿಯಾಗಿದೆ.
ತುಮಕೂರು: ರೈಲಿಗೆ ತಲೆಕೊಟ್ಟು ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಣಿಗಲ್ ರೈಲ್ವೆ ನಿಲ್ದಾಣ ಬಳಿ ಶನಿವಾರ ಬೆಳಿಗ್ಗೆ ವರದಿಯಾಗಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅಡವಿ ಗ್ರಾಮದ ಯಲ್ಲಾಲಿಂಗ ಮೇಟಿ (26) ಮೃತ ಪೇದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯಲ್ಲಾಲಿಂಗ ಮೇಟಿ ಅವರು ಕುಣಿಗಲ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.