ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ 5 ಬಲಿ, ಬೆಂಗಳೂರಿನಲ್ಲಿ 672 ಸೇರಿ 1,196 ಮಂದಿಗೆ ಪಾಸಿಟಿವ್

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಭಾನುವಾರ 1,196 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,01,410ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,944 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 2,036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,72,038ಕ್ಕೆ ಏರಿಕೆಯಾಗಿದೆ. ಇನ್ನ 17,409 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 260 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 672 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,78,529ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,233 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

SCROLL FOR NEXT