ಬಿಎಂಟಿಸಿ ನೌಕರರ ಮೇಲೆ ಹಲ್ಲೆ ಆರೋಪ: 9 ಮಂದಿಯ ಬಂಧನ
ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ 9 ಮಂದಿ ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾಗಿದ್ದ ಬಿಎಂಟಿಸಿ ನೌಕರರ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ 9 ಮಂದಿ ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯಿಸಿ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 9 ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.
ಬಿಎಂಟಿಸಿ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿದ್ದಾಗ ಈ ಮಧ್ಯೆಯೂ ಕೆಲ ನೌಕರರು, ಕರ್ತವ್ಯಕ್ಕೆ ಹಾಜರಾಗಲು ಶನಿವಾರ ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದಿದ್ದರು. ಅದೇ ವೇಳೆ ಗುಂಪೊಂದು, ನೌಕರರ ಮೇಲೆ ಹಲ್ಲೆ ನಡೆಸಿತ್ತು ಎಂದು ಅವರು ಹೇಳಿದರು. ಇದೇ ವೇಳೆ 'ನಿಲ್ದಾಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕರ್ತವ್ಯಕ್ಕೆ ಹಾಜರಾಗುವ ನೌಕರರಿಗೆ ಭದ್ರತೆ ನೀಡಲಾಗುವುದು' ಎಂದೂ ತಿಳಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.