ರಾಜ್ಯದಲ್ಲಿ 9 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಟ್ಟ 9 ತಿಂಗಳ ಬಳಿಕ ಸೋಂಕಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಟ್ಟ 9 ತಿಂಗಳ ಬಳಿಕ ಸೋಂಕಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.
ನಿನ್ನೆ ಒಂದೇ ದಿನ ರಾಜ್ಯದಲ್ಲಿ 1203 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1531 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,00,214ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಬಿಡುಗಡೆಯಾದವರ ಸಂಖ್ಯೆ 8,68,471ಕ್ಕೆ ಏರಿಕೆಯಾಗಿದೆ. ಇನ್ನೂ ಒಟ್ಟು 11,939 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಉಳಿದ 18,254 ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 224 ಜನರು ಐಸಿಯುವಿನಲ್ಲಿದ್ದಾರೆ.
ಕಳೆದ ಏಳು ದಿನಗಳಲ್ಲಿ ಕರ್ನಾಟಕದ ಸಕ್ರಿಯ ಪ್ರಕರಣಗಳ ಪ್ರಮಾಣ 1.3% ಆಗಿದ್ದು, ಹಾವೇರಿ ಜಿಲ್ಲೆಯು ಅತಿ ಹೆಚ್ಚು 2.3% ಸಕ್ರಿಯ ಪ್ರಕರಣಗಳು ಕಂಡು ಬಂದಿದೆ.
ನಂತರ ಸ್ಥಾನಗಳಲ್ಲಿ ಹಾಸನ (1.8%), ಚಿಕ್ಕಮಗಳೂರು (1.7%), ಉತ್ತರಕನ್ನಡ (1.6%). ಬೆಂಗಳೂರು ನಗರ (1.6) %)ದಲ್ಲಿ ರಷ್ಟಿದೆ.
ರಾಜ್ಯದ ಒಟ್ಟಾರೆ ಪ್ರಕರಣ ಸಾವಿನ ಪ್ರಮಾಣ ಶೇ. 1.3%ರಷ್ಟಿದ್ದು, ಧಾರವಾಡ ಜಿಲ್ಲೆಯಲ್ಲಿ 2.8%, ಬೀದರ್ 2.4%, ದಕ್ಷಿಣ ಕನ್ನಡ 2.3%.ರಷ್ಟು ಕಂಡು ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.