ರಾಜ್ಯ

ಬೆಂಗಳೂರು: ದೇಶದ ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ಇನ್ನಿಲ್ಲ

Lingaraj Badiger

ಬೆಂಗಳೂರು: ದೇಶದ ಹಿರಿಯ ವಿಜ್ಞಾನಿ, ಪ್ರೊಫೆಸರ್ ರೊದ್ದಂ ನರಸಿಂಹ ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 87 ವರ್ಷದ ರೊದ್ದ ನರಸಿಂಹ ಅವರು ಒಂದು ವಾರದಿಂದ ನಗರದ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 48 ಗಂಟೆಗಳಿಂದ ಕೃತಕ ಉಸಿರಾಟ ವ್ಯವಸ್ಥೆಯ ನೆರವಿನಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ ನಿಧನರಾಗಿದ್ದಾರೆ.

1933ರ ಜು. 20ರಂದು ಜನಿಸಿದ್ದ ನರಸಿಂಹ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಇ ಪದವಿ ಪಡೆದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಕ್ಯಾಲಿಫೊರ್ನಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋಧನೆ ನಡೆಸಿದ್ದರು.

ರೊದ್ದಂ ನರಸಿಂಹ ಅವರು ಭಾರತೀಯ ವೈಮಾನಿಕ ವಿಜ್ಞಾನಿ ಮತ್ತು ದ್ರವಚಲನ ಶಾಸ್ತ್ರಜ್ಞರಾಗಿದ್ದರು. ಅವರು ಹಿಂದೆ ಭಾರತೀಯ ವಿಜ್ಞಾನ ಸಂಸ್ಥೆ(IISc)ಯಲ್ಲಿ ಏರೋಸ್ಪೇಸ್ ಇಂಜಿನೀಯರಿಂಗ್ ನ ಪ್ರಾಧ್ಯಾಪಕರೂ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ(NAL) ನಿರ್ದೇಶಕರೂ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್(ನಿಯಾಸ್)ನ ನಿರ್ದೇಶಕರಾಗಿ ಮತ್ತು ವೈಜ್ಞಾನಿಕ ಸಂಶೋಧನೆಗಾಗಿ ಬೆಂಗಳೂರಿನಲ್ಲಿ ಇರುವ ಜವಾಹರಲಾಲ್ ನೆಹರು ಕೇಂದ್ರದ (JNCASR)ಇಂಜಿನಿಯರಿಂಗ್ ಮೆಕ್ಯಾನಿಕ್ಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

SCROLL FOR NEXT