ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 
ರಾಜ್ಯ

ಪರಿಷ್ಕೃತ ರೂಪದಲ್ಲಿ 'ವಿದ್ಯಾಗಮ' ಅನುಷ್ಠಾನ- ಸುರೇಶ್ ಕುಮಾರ್ 

 ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು  ಸುರಕ್ಷತಾ ಕ್ರಮಗಳೊಂದಿಗೆ ಹೊಸ  ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು  ಸುರಕ್ಷತಾ ಕ್ರಮಗಳೊಂದಿಗೆ ಹೊಸ  ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ  ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ಹೇಳಿದ್ದಾರೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮವನ್ನು ಉಚ್ಚ ನ್ಯಾಯಾಲಯದ ಅಪೇಕ್ಷೆಯನುಸಾರ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದ್ದು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ. ಪ್ರಸ್ತುತ ಇರುವ ಆನ್ಲೈನ್, ಚಂದನಾ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳುವುದು ಎಂದು ಸಚಿವರು ತಿಳಿಸಿದ್ದಾರೆ.

ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ  ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ  ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ  ಎಂದು ಅವರು ಹೇಳಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ  3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ.  ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಕ್ಕಳ ಕಲಿಕಾ ನಿರಂತರತೆಗೆ ವಿದ್ಯಾಗಮವು ಅನುಕೂಲವಾಗಿದ್ದು, ಶಿಕ್ಷಕರು ಮತ್ತು ಪೋಷಕರಲ್ಲಿ ಒಳ್ಳೆಯ ಭಾವನೆ ಮೂಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ವಿದ್ಯಾಗಮ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಷ್ಕರಿಸಿ ಪುನರಾರಂಭಿಸಲು ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧತೆ  ಮಾಡಿಕೊಂಡಿದ್ದು, ಶೀಘ್ರವೇ ಪುನರಾರಂಭಿಸಲಾಗುವುದು. ಒಟ್ಟಾರೆ ಪ್ರತಿಯೊಬ್ಬರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳ ಕಲಿಕಾ ನಿರಂತರತೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ  ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT