ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 676 ಸೇರಿ 1,240 ಮಂದಿಗೆ ಪಾಸಿಟಿವ್, 6 ಬಲಿ!

ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು ಇಂದು 1,240 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು ಇಂದು 1,240 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,971 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 1,403 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,77,199ಕ್ಕೆ ಏರಿಕೆಯಾಗಿದೆ. ಇನ್ನ 15,476 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 260 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 676 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,80,247ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,245 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!