ಬೆಂಗಳೂರು: ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ವಂಚಿಸುತ್ತಿದ್ದವ ಸಿಸಿಬಿ ಬಲೆಗೆ!
ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು: ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜ್ ಎಂಬಾತನ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯುವರಾಜ್, ಬಿಜೆಪಿ ನಾಯಕರೊಂದಿಗೆ ಭಾವಚಿತ್ರ ತೆಗೆಸಿಕೊಂಡು ತಾನು ಬಹಳಷ್ಟು ಮಂದಿ ಬಿಜೆಪಿ ನಾಯಕರೊಂದಿಗೆ ಆತ್ಮೀಯನಾಗಿದ್ದೇನೆ ಎಂದು ನಂಬಿಸುತ್ತಿದ್ದನು.
ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ನನ್ನಿಂದ ಹಣ ಪಡೆದಿದ್ದು, ನಂತರ ಯಾವುದೇ ಹುದ್ದೆ ಕೊಡಿಸದೇ ವಂಚಿಸಿದ್ದಾನೆ ಎಂದು ಆರೋಪಿಸಿ ಯುವರಾಜ್ ವಿರುದ್ಧ ಇತ್ತೀಚಿಗೆ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಸಿಸಿಬಿ ಗೆ ದೂರು ನೀಡಿದ್ದರು.
ಈ ಕುರಿತು ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಯುವರಾಜ್ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ತನಿಖೆ ವೇಳೆ ಈತ ಬಹುತೇಕ ಜನರಿಂದ ಕೋಟ್ಯಂತರ ರೂ. ಹಣ ಪಡೆದು ವಂಚನೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಸದ್ಯ ಆತನನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.