ರಾಜ್ಯ

ಬೆಚ್ಚಿಬಿದ್ದ ಮಂಗಳೂರು: ಹಾಡ ಹಗಲೇ ಹೆಡ್ ಕಾನ್‌ಸ್ಟೆಬಲ್ ಮೇಲೆ ತಲ್ವಾರ್ ದಾಳಿ

ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರ ಮೇಲೆ ದುಷ್ಕರ್ಮಿ ಹಾಡಹಗಲೇ ತಲ್ವಾರ್, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರ ಮೇಲೆ ದುಷ್ಕರ್ಮಿ ಹಾಡಹಗಲೇ ತಲ್ವಾರ್, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ನ್ಯೂ ಚಿತ್ರ ಟಾಕೀಸ್ ಎದುರು ನಡೆದ ಘಟನೆಯಲ್ಲಿ ಬಂದರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಗಣೇಶ್ ಕಾಮತ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಗಣೇಶ್ ಕಾಮತ್ ಹಾಗೂ ಇನ್ನಿತರೆ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಣೇಶ ಕಾಮತ್ ಮೇಲೆ ತಲ್ವಾರ್ ಬೀಸಿದ್ದಾನೆ, ಆ ವೇಳೆ ಕೈಗೆ ಗಾಯವಾದ ಗಣೇಶ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆ ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಹೆಡ್ ಕಾನ್‌ಸ್ಟೆಬಲ್‌ನೊಂದಿಗಿನ ಹಳೆ ದ್ವೇಷವು ದಾಳಿಯ ಹಿಂದಿನ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ,  ದುಶ್ಕರ್ಮಿಯ ಸುಳಿವಿಗಾಗಿ ಪೋಲೀಸರು ಶೋಧ ನಡೆಸಿದ್ದಾರೆ. ಆತ ಸಹ ಸ್ಥಳೀಯ ನಿವಾಸಿ ಎಂದು ಶಂಕೆ ಇದೆ.

ಮೂರು ವರ್ಷಗಳ ಹಿಂದೆ, ಏಪ್ರಿಲ್ 5, 2017 ರಂದು ನಗರದ ಉರ್ವ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಐತಪ್ಪ ಅವರ ಮೇಲೆ ನಗರದ ಲೇಡಿಹಿಲ್ ಸರ್ಕಲ್ ಬಳಿ ಮುಂಜಾನೆ ಇದೇ ಬಗೆಯಲ್ಲಿ ಹಲ್ಲೆ ನಡೆಸಲಾಗಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ಹಲ್ಲೆಕೋರರು ಐತಪ್ಪ ಅವರಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಪರಾರಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

SCROLL FOR NEXT