ಸಂಗ್ರಹ ಚಿತ್ರ 
ರಾಜ್ಯ

ಸ್ನೇಹಿತೆ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ, ಕೊಲೆ: ಆರೋಪಿ ಬಂಧನ

ಖಾಸಗಿ ಕಾಲೇಜನಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ, ಆನಂತರ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಖಾಸಗಿ ಕಾಲೇಜನಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ, ಆನಂತರ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಅಸ್ಸಾಂ ಮೂಲಕ  20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಹತ್ಯೆಗೀಡಾದ ದುರ್ದೈವಿಯಾಗಿದ್ದಾಳೆ. ಘಟನೆ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಮೃತ ಯುವತಿ ಹಾಗೂ ಆರೋಪಿ ರೆಹಮಾನ್ ಆತ್ಮೀಯ ಸ್ನೇಹಿತರಾಗಿದ್ದು, ಆ ಎರಡೂ ಕುಟುಂಬಗಳಿಗೆ ಆಪ್ತ ಒಡನಾಟವಿದೆ. ಒಂದೂವರೆ ವರ್ಷದಿಂದ ನಗರದ ಖಾಸಗಿ ಕಾಲೇಜಿನಲ್ಲಿ ರೆಹಮಾನ್ ಮೂಲಕ ಮೃತ ಯುವತಿ ಕೂಡ ಬೆಂಗಳೂರಿನಲ್ಲಿ ನರ್ಸಿಂಗ್ ಓದಲು ಬಂದಿದ್ದಳು. ಅಸ್ಸಾಂನಿದ ಮಂಗಳವಾರವಷ್ಟೇ ಬಂದು ಕಾಲೇಜಿಗೆ ಆಕೆ ದಾಖಲಾಗಿದ್ದಳು. ಕಾಲೇಜಿಗೆ ಸೇರುವಾಗ ರೆಹಮಾನ್ ಸಹಾಯ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 

ಕಾಲೇಜಿನ ಹಾಸ್ಟೆಲ್ ನಲ್ಲಿ ಯುವತಿ ವಾಸ್ತವ್ಯ ಹೂಡಿದ್ದಳು. ಕೆಲವು ವಸ್ತುಗಳ ಖರೀದಿ ಸಲುವಾಗಿ ಗೆಳೆಯ ರೆಹಮಾನ್'ನನ್ನು ಶಾಪಿಂಗ್'ಗೆ ಕರೆದುಕೊಂಡು ಹೋಗಲು ಆಕೆ, ಬುಧವಾರ ಬೆಳಿಗ್ಗೆ ಬ್ಯಾಡರಹಳ್ಳಿ ಸಮೀಪವಿರುವ ರೆಹಮಾನ್ ಕೊಠಡಿಗೆ ಬಂದಿದ್ದಳು. ಆ ವೇಳೆ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆಂದು ಹೇಳಲಾಗುತ್ತಿದೆ. 

ಈ ನಡುವೆ ಘಟನೆ ಸಂಬಂಧ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಸ್ನೇಹಿತ ಪ್ರಜ್ಞಾಹೀನಳಾದಳು. ಇದರಿಂದ ನನಗೆ ಭಯವಾಯಿತು. ಕೂಡಲೇ ನೆರೆಮನೆಯವರ ನೆರವು ಪಡೆದು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಸ್ಪತ್ರೆ ಸೇರುವ ಮುನ್ನವೇ ಮೃತಪಟ್ಟಿದ್ದಾಳೆಂದು ದೃಢಪಡಿಸಿದರು. ನಾನು ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ. 

ಘಟನೆ ಸಂಬಂಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT