ಪ್ರಭು ಚೌಹಾಣ್ 
ರಾಜ್ಯ

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು: ಪ್ರಭು ಚವಾಣ್

ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್‌ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ

ಯಾದಗಿರಿ: ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್‌ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಪ್ರಭು ಚವಾಣ್ ಆರೋಪಿಸಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಹೋರಾಟ ಮಾಡುವವರು ರೈತರಾಗಿದ್ದರೆ ಹೊಲಗಳಲ್ಲಿ ಈಗ ಕೆಲಸ ಮಾಡುತ್ತಿದ್ದರು. ಆದರೆ, ಅಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಇರುವುದರಿಂದ ಅಲ್ಲಿರುವವರು ರೈತರಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಲ್ಲ’ ಎಂದು ಹೇಳಿದರು. ‌‘ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗಾಗಿ ಉತ್ತಮ
ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇವುಗಳ ಬಗ್ಗೆ ಸಚಿವರೊಂದಿಗೆ ಮಾತುಕತೆಯಾಡುವುದು ಬಿಟ್ಟು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಪರಿಷತ್‌ನಲ್ಲಿ ಗದ್ದಲ, ಎಳೆದಾಟ ಮಾಡಿ ಕಾಂಗ್ರೆಸ್‌ ಸದಸ್ಯರು ತಮ್ಮ ಸಂಸ್ಕೃತಿ ತೋರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹರಿಹಾಯ್ದರು. ಕಾಂಗ್ರೆಸ್‌ನವರು ಪವಿತ್ರವಾಗಿರುವ ವಿಧಾನ ಪರಿಷತ್‌ ಸಭೆಯ ಬಾಗಿಲನ್ನು ಕಾಲಿನಿಂದ ಒದ್ದು ಅಪವಿತ್ರ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತವರನ್ನು ಎಳೆದಾಡಿದ್ದಾರೆ ಎಂದು ದೂರಿದರು.

‘ದೇಶದ ಸಂಸ್ಕೃತಿ, ಪರಂಪರೆ ಧರ್ಮ ನಂಬಿಕೆಗಳ ವಿರುದ್ಧ ಅಮಾನವೀಯವಾಗಿ ವರ್ತಿಸಿದ ಕಾಂಗ್ರೆಸ್‌ ಪಕ್ಷವನ್ನು ಎತ್ತಿ ಮೂಲೆಗೆ ಬಿಸಾಕಿದ್ದರೂ ಇನ್ನು ಬುದ್ಧಿ ಕಲಿತುಕೊಂಡಿಲ್ಲ’ಎಂದು ಟೀಕಿಸಿದರು. ‘ಈ ವಿಧೇಯಕವನ್ನು ಯಾರೇ ಅಡ್ಡಿ ಮಾಡಿದರೂ ನಾವು ಪಾಸ್ ಮಾಡಿ ಗೋಮಾತೆಯ ಋಣ ತೀರಿಸುತ್ತೇವೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel