ರಾಜ್ಯ

ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಿ ಮೋದಿ ತೀವ್ರ ಕಳವಳ: ಸಿಎಂ ಯಡಿಯೂರಪ್ಪ

Manjula VN

ಬೆಂಗಳೂರು: ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ಟ್ರಾನ್ ಐಫೋನ್ ಘಟಕದ ಮೇಲೆ ನಡೆದ ದಾಳಿ ಘಟನೆಗೆ ಪ್ರಧಾನಿ ಮೋದಿಯವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಪ್ರಕರಣ ಸಂಬಂಧ ಸರ್ಕಾರ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

ಕಂಪನಿಯು ತನ್ನ ಕಾರ್ಯಗಳನ್ನು ಮತ್ತೆ ಪುನರಾರಂಭಿಸಲು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಬೆಂಬಲವನ್ನು ಸರ್ಕಾರ ನೀಡಲಿದೆ. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ನಡೆದ ಈ ಬೆಳವಣಿಗೆಗೆ ಪ್ರಧಾನಿ ಮೋದಿಯವರು ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದಿದ್ದಾರೆ. 

SCROLL FOR NEXT