ಸಿದ್ದರಾಮಯ್ಯ 
ರಾಜ್ಯ

ಬೀಫ್ ಸೇವನೆ ಹೇಳಿಕೆ: ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ - ಮಾಜಿ ಸಿಎಂ ಸಿದ್ದರಾಮಯ್ಯ

ಕೊಡವರು ಬೀಫ್ ತಿನ್ನುತ್ತಾರೆ ಎನ್ನುವ ತಮ್ಮ ಹೇಳಿಕೆ ತಪ್ಪು ಗ್ರಹಿಕೆಯಿಂದ ವರದಿಯಾಗಿದ್ದು, ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಕೊಡವರು ಬೀಫ್ ತಿನ್ನುತ್ತಾರೆ ಎನ್ನುವ ತಮ್ಮ ಹೇಳಿಕೆ ತಪ್ಪು ಗ್ರಹಿಕೆಯಿಂದ ವರದಿಯಾಗಿದ್ದು, ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿಯ ಬಗ್ಗೆ  ಅರಿವಿದೆ. ವಿಶೇಷವಾದ ಗೌರವವೂ ಇದೆ. ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ. ಆಹಾರಕ್ಕೆ ಜಾತಿ ಧರ್ಮಗಳನ್ನು ಗಂಟು ಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು ಕೊಡವರು ಬೀಫ್ ತಿನ್ನುತ್ತಾರೆ ಎಂದು ಹೇಳಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮುಸಲ್ಮಾನರು ಮಾತ್ರವಲ್ಲ, ದಲಿತರು, ಕೊಡವರು ಬೀಫ್ ತಿನ್ನುತ್ತಾರೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಇದಕ್ಕೆ ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಹಲವರು ಟೀಕಾಪ್ರಹಾರ ನಡೆಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!