ಮಂಜುನಾಥ್ ಪ್ರಸಾದ್ 
ರಾಜ್ಯ

ಹೊಸವರ್ಷ ಸಂಭ್ರಮ: ನಗರದ ಎಲ್ಲಾ ಪಬ್, ರೆಸ್ಟೋರೆಂಟ್'ಗಳಲ್ಲಿ ಪಾರ್ಟಿ ನಿಷೇಧ 

ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ಹೊಸ ವರ್ಷ ಆಚರಣೆ ಸಂದರ್ಭ ನಗರದಲ್ಲಿರುವ ಎಲ್ಲಾ ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. 

ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ಹೊಸ ವರ್ಷ ಆಚರಣೆ ಸಂದರ್ಭ ನಗರದಲ್ಲಿರುವ ಎಲ್ಲಾ ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. 

ಈ ಕುರಿತು ಮಾತನಾಡಿರುವ ಬಿಬಿಎಪಿ ಆಯುಕ್ತ ಮಂಜುನಾಥ್ ಪ್ರಸಾತ್ ಅವರು, ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲ ಸೇರಿದಂತೆ ನಗರದ ಎಲ್ಲಾ ಜನನಿ ಬಿಡ ಪ್ರದೇಶಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲೂ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ ಎಂದು ಹೇಳಿದ್ದಾರೆ. 

ಆರೋಗ್ಯ ಸಚಿವ ಸುಧಾಕರ್ ಅವರು ಮಾತನಾಡಿ, ಹೊಸ ವರ್ಷ ಸಂಭ್ರಮದ ವೇಳೆ ಹೆಚ್ಚೆಚ್ಚು ಜನರು ಸೇರಿ ಸಂಭ್ರಮವನ್ನಾಚರಿಸುತ್ತಾರೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಪಾರ್ಟಿಗಳನ್ನು ಹೆಚ್ಚಾಗಿ ನಡೆಸಲಾಗುತ್ತದೆ. ಹೆಚ್ಚೆಚ್ಚು ಜನರು ಸೇರುವುದನ್ನು ತಡೆಯಬೇಕಿದೆ. ಹೀಗಾಗಿ ಸಾರ್ವಜನಿಕ ಸಂಭ್ರಮಗಳ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT