ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಬೆಂಗಳೂರಿನಲ್ಲಿ 659 ಸೇರಿ 1,194 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಭಾನುವಾರ 1,194 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,09,469ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,009 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ ಇಬ್ಬರು, ಚಾಮರಾಜನಗರ ಜಿಲ್ಲೆಯಲ್ಲಿ ಇಬ್ಬರು ಹಾಗೂ ವಿಜಯಪುರದಲ್ಲಿ ಒಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು 659 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,82,868ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1062 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,82,944ಕ್ಕೆ ಏರಿಕೆಯಾಗಿದೆ. ಇನ್ನು 14,497 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 219 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SCROLL FOR NEXT