ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ 

ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.

ಸಿದ್ದರಾಮಯ್ಯ
Nagaraja AB
Updated On : 21 Dec 2020, 12:59 pm

ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು  ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಡಿಕೇರಿ ಕೊಡವ ಸಮಾಜ, ಪೊನ್ನಂಪೇಟೆ  ಕೊಡವ ಸಮಾಜ, ಮಡಿಕೇರಿ ಹಿತ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆ ಸದಸ್ಯರು ಜಮಾವಣೆಗೊಂಡು ಘೋಷಣೆ ಕೂಗಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದರು. ಕಾವೇರಿ ಮಾತೆ, ಇಗ್ಗುತ್ತಪ್ಪ, ಕೊಡವ ಕುಲಕ್ಕೆ ಪ್ರತಿಭಟನಕಾರರು ಜಯಕಾರ ಹಾಕಿದರು.

ಸಿದ್ದರಾಮಯ್ಯ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ಅಪಮಾನವಾಗಿದೆ. ಸಿದ್ದರಾಮಯ್ಯ ಬಹಿರಂಗವಾಗಿ ಕೊಡವರ ಕ್ಷಮೆ ಕೋರಬೇಕು. ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಕಾರರ ಒಕ್ಕೊರಲಿನಿಂದ ಆಗ್ರಹಿಸಿದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments