ರಾಜ್ಯದಲ್ಲಿ ಇಂದು ಕೊರೋನಾ ಉಲ್ಬಣ: 1,141 ಮಂದಿಗೆ ಪಾಸಿಟಿವ್, 14 ಬಲಿ!
ರಾಜ್ಯದಲ್ಲಿ ಕೊರೋನಾ ಉಲ್ಬಣಗೊಂಡಿದ್ದು ಇಂದು 1,141 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,11,382ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಉಲ್ಬಣಗೊಂಡಿದ್ದು ಇಂದು 1,141 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,11,382ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 12,029 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 585 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,83,816ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 8 ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 1,136 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,85,341ಕ್ಕೆ ಏರಿಕೆಯಾಗಿದೆ. ಇನ್ನು 13,993 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 216 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.