ಮತಹಕ್ಕು ಚಲಾಯಿಸಲು ಸಾಲಿನಲ್ಲಿ ನಿಂತಿರುವ ಮತದಾರರು 
ರಾಜ್ಯ

3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭ: ಮತದಾನ ಪ್ರಕ್ರಿಯೆ ಬಿರುಸು

ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. 

ಬೆಂಗಳೂರು: ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. 

ಇಂದು ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ನಡೆಯಲಿದೆ. ರಾಜ್ಯದ 117 ತಾಲ್ಲೂಕುಗಳ 3019 ಗ್ರಾಮ ಪಂಚಾಯಿತಿಗಳಿಗೆ  ಚುನಾವಣೆ ನಡೆಯುತ್ತಿದ್ದು, 117383 ಅಭ್ಯರ್ಥಿಗಳ ರಾಜಕೀಯ ಹಣೆಬರಹ ನಿರ್ಧಾರವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾವಣೆಗಾಗಿ ಮತದಾರರು ಮತಗಟ್ಟೆಯತ್ತ ಉತ್ಸಾಹದಿಂದ ಬರಲಾರಂಭಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿ ಬೆಳಗ್ಗೆ ಭಾರೀ ಚಳಿಯಿದ್ದರೂ ಮತದಾರರು ಮತಗಟ್ಟೆ ಎದುರು ಸಾಲುಗಟ್ಟಿ ನಿಂತಿರುವು ದೃಶ್ಯಗಳು ಕಂಡುಬಂದವು. ಅದೇ ರೀತಿ ಚಾಮರಾಜನಗರ, ಚಿತ್ರದುರ್ಗದ ಹಲವು ಗ್ರಾಮಗಳಲ್ಲಿ ಮತದಾನ ಬಿರುಸಿನಿಂದ ಕೂಡಿದೆ.

ಮತದಾರರು ಕಡ್ಡಾಯವಾಗಿ ಕೋವಿಡ್-19 ನಿಯಮಗಳಾದ ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ಯಾನಿಂಗ್ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮತದಾನ ಮಾಡಬೇಕಿದೆ. 

ಮರು ಮತದಾನ ಅಗತ್ಯವಿದ್ದರೆ ಗುರುವಾರ ನಡೆಯಲಿದ್ದು. ಡಿ.30ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 2ನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. 

ಮೊದಲ ಹಂತದ ಚುನಾವಣೆ ಮತದಾನ ಪ್ರಕ್ರಿಯೆಗಾಗಿ 5847 ಚುನಾವಣಾಧಿಕಾರಿ ಮತ್ತು 6085 ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆಗಳಲ್ಲಿ ಸಿಬ್ಬಂದಿ ಕೊರತೆ ಆಗದಂತೆ ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಪ್ರತೀ ಮತಗಟ್ಟೆಯ ಮತದಾರರ ಸಂಖ್ಯೆಯನ್ನು 1400 ರಿಂದ 1000ಕ್ಕೆ ಇಳಿಸಲಾಗಿದೆ. ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. 

ಗ್ರಾಮ ಪಂಚಾಯಿತಿ ಮತ ಕ್ಷೇತ್ರಗಳ ಮತದಾರರಿಗೆ ಮತದಾನ ಮಾಡಲು ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿಕ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉದ್ಯೋಗಿಗಳು, ಉಳಿಕ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆ ಸೇರಿ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ವೇತನ ಸಹಿತ ರಜೆ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT